ನವದೆಹಲಿ: ಕರೋನವೈರಸ್ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 50,000 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ನೀಡಿದೆ.
ಎಲ್ಲಾ ರಾಜ್ಯಗಳು ಈ ಮೊತ್ತವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತವೆ ಎಂದು ಕೇಂದ್ರ ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (NDMA) ಈ ಶಿಫಾರಸುಗಳನ್ನು ಮಾಡಿದ್ದು, ಅದನ್ನು ಒಪ್ಪಿಕೊಳ್ಳಲಾಗಿದೆ ಎಂದು ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೊರೊನಾ ವೈರಸ್ನಿಂದಾಗಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ ಮತ್ತು ಕೋವಿಗ್ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವ ಕಳೆದುಕೊಂಡವರಿಗೂ 50,000 ರೂಗಳ ಎಕ್ಸ್-ಗ್ರೇಷಿಯಾ ಮೊತ್ತವನ್ನು ನೀಡಲಾಗುತ್ತಿದೆ.
ಆದರೆ, ಪರಿಹಾರ ಮೊತ್ತವನ್ನು ಪಡೆಯಲು, ಕುಟುಂಬದ ಸದಸ್ಯರ ಸಾವಿಗೆ ಕೋವಿಡ್ -19 ಕಾರಣ ಎಂದ ದೃಢೀಕರಿಸಬೇಕು. ಈ ಸಂದರ್ಭದಲ್ಲಿ ಆಸ್ಪತ್ರೆ ಅಥವಾ ವೈದ್ಯರ ವರದಿ ಮಾನ್ಯವಾಗುತ್ತದೆ.
ಬುಧವಾರ, ದೇಶವು 24 ಗಂಟೆಗಳಲ್ಲಿ ಕೋವಿಡ್-19 ಸೋಂಕಿನಿಂದ 383 ಸಾವುಗಳನ್ನು ವರದಿ ಮಾಡಿದೆ. ಹೊಸ ಸಾವುಗಳ ಸೇರ್ಪಡೆಯೊಂದಿಗೆ, ಕೋವಿಡ್ ಸಂಬಂಧಿತ ಸಾವುಗಳ ಸಂಖ್ಯೆ 4,45,768 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.