ನವದೆಹಲಿ: ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿದ್ದಾರೆ. ವಾಷಿಂಗ್ಟನ್ನಲ್ಲಿ, ಪ್ರಧಾನಿ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬುಧವಾರ, ಪಿಎಂ ಮೋದಿ ಅವರು ವಾಷಿಂಗ್ಟನ್ ಡಿಸಿಯ ಜಾಯಿಂಟ್ ಬೇಸ್ ಆಂಡ್ರ್ಯೂಸ್ಗೆ ಆಗಮಿಸಿದರು, ಈ ವೇಳೆ ಭಾರತೀಯ ಅಮೆರಿಕನ್ನರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ ಮತ್ತು ಭಾರತೀಯ ಧ್ವಜವನ್ನು ಬೀಸಿ ಅವರಿಗೆ ಆತ್ಮೀಯ ಸ್ವಾಗತ ನೀಡಿದ್ದಾರೆ.
ಬುಧವಾರ ಮುಂಜಾನೆಯ ಭಾರೀ ಮಳೆಯ ಹೊರತಾಗಿಯೂ, ಭಾರತೀಯರು ಪ್ರಧಾನಮಂತ್ರಿಯನ್ನು ಸ್ವಾಗತಿಸಲು ಭಾರೀ ಸಂಖ್ಯೆಯಲ್ಲಿ ಆಂಡ್ರ್ಯೂಸ್ ಜಾಯಿಂಟ್ ವಾಯುಪಡೆ ನೆಲೆಯಲ್ಲಿ ಜಮಾಯಿಸಿದ್ದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಜೋ ಬೈಡೆನ್ ಆಡಳಿತದ ಹಿರಿಯ ಅಧಿಕಾರಿಗಳು ಮತ್ತು ಅಮೆರಿಕದ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಸ್ವಾಗತಿಸಿದರು.
Landed in Washington DC. Over the next two days, will be meeting @POTUS @JoeBiden and @VP @KamalaHarris, Prime Ministers @ScottMorrisonMP and @sugawitter. Will attend the Quad meeting and would also interact with leading CEOs to highlight economic opportunities in India. pic.twitter.com/56pt7hnQZ8
— Narendra Modi (@narendramodi) September 22, 2021
“ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ಸಮುದಾಯಕ್ಕೆ ಆತ್ಮೀಯ ಸ್ವಾಗತಕ್ಕಾಗಿ ಕೃತಜ್ಞತೆಗಳು” ಎಂದು ಮೋದಿ ಹೇಳಿದ್ದಾರೆ.
Grateful to the Indian community in Washington DC for the warm welcome. Our diaspora is our strength. It is commendable how the Indian diaspora has distinguished itself across the world. pic.twitter.com/6cw2UR2uLH
— Narendra Modi (@narendramodi) September 22, 2021
ಅಮೆರಿಕದೊಂದಿಗೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಪ್ರಧಾನಿ ಮೋದಿ ಈ ಭೇಟಿಯನ್ನು ಒಂದು ಅವಕಾಶವಾಗಿ ನೋಡುತ್ತಿದ್ದಾರೆ.
ಅವರು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸಲಿದ್ದಾರೆ ಮತ್ತು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿಯಾಗುವುದರಿಂದ ಮಾರ್ಚ್ನಲ್ಲಿ ನಡೆದ ವರ್ಚುವಲ್ ಶೃಂಗಸಭೆಯ ಫಲಿತಾಂಶಗಳ ಅವಲೋಕನ ಮಾಡಲು ಅವಕಾಶ ಸಿಗುತ್ತದೆ.
ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ನ ಪ್ರಧಾನಮಂತ್ರಿ ಯೋಶಿಹೈಡೆ ಸುಗಾ ಅವರನ್ನು ಭೇಟಿ ಮಾಡಲಿದ್ದಾರೆ.
ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಅವರ ಹಂಚಿಕೆಯ ದೃಷ್ಟಿಕೋನದ ಆಧಾರದ ಮೇಲೆ ಭವಿಷ್ಯದ ತೊಡಗಿಸಿಕೊಳ್ಳುವಿಕೆಗಳ ಆದ್ಯತೆಗಳನ್ನು ಗುರುತಿಸಲು ಈ ಸಭೆಗಳು ಸಹಾಯ ಮಾಡುತ್ತವೆ ಎಂದು ಮೋದಿ ಹೇಳಿದ್ದಾರೆ.
ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಅಫ್ಘಾನಿಸ್ತಾನದ ಪರಿಸ್ಥಿತಿ ಮತ್ತು ಅದರ ಪರಿಣಾಮಗಳ ಕುರಿತು ನಾಯಕರ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಿದ್ದಾರೆ.
ಚೀನಾದ ಬೆಳೆಯುತ್ತಿರುವ ಪಾರುಪತ್ಯ, ಮೂಲಭೂತವಾದವನ್ನು ತಡೆಯುವ ಮಾರ್ಗಗಳು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯು ಚರ್ಚೆಯ ಕೆಲವು ಮುಖ್ಯ ವಿಷಯಗಳಾಗಲಿವೆ.
ಭಾರತ ಮತ್ತು ಅಮೆರಿಕದ ಜಾಗತಿಕ ಪಾಲುದಾರಿಕೆಯ ಮತ್ತಷ್ಟು ವಿಸ್ತರಣೆಯು ಸೆಪ್ಟೆಂಬರ್ 24 ರಂದು ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಬೈಡೆನ್ ನಡುವಿನ ಸಭೆಯ ಕೇಂದ್ರಬಿಂದುವಾಗಿದೆ.
ಪ್ರಧಾನಿ ಮೋದಿಯವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಉನ್ನತ ಮಟ್ಟದ ನಿಯೋಗವು ಇರಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾಗಲಿದ್ದಾರೆ.
ಉಭಯ ನಾಯಕರ ನಡುವಿನ ಮಾತುಕತೆಗಳು ವಿಶೇಷವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರದ ಅವಕಾಶಗಳನ್ನು ಅನ್ವೇಷಿಸುವ ಗುರಿಯನ್ನು ಕೇಂದ್ರೀಕರಿಸುತ್ತವೆ.
ಪ್ರಧಾನ ಮಂತ್ರಿಯವರು ವಾಷಿಂಗ್ಟನ್ನಲ್ಲಿ ಹಲವಾರು ಪ್ರಮುಖ ಅಮೆರಿಕನ್ ಕಂಪನಿಗಳ ಉನ್ನತ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ.
ಸುದ್ದಿ ಸಂಸ್ಥೆಯ ಪ್ರಕಾರ, ಈ ಸಭೆಯಲ್ಲಿ ಕ್ವಾಲ್ಕಾಮ್, ಅಡೋಬ್, ಬ್ಲ್ಯಾಕ್ ಸ್ಟೋನ್, ಜನರಲ್ ಅಟೊಮಿಕ್ಸ್ ಮತ್ತು ಫಸ್ಟ್ ಸೋಲಾರ್ ಮುಖ್ಯಸ್ಥರು ಇರಲಿದ್ದಾರೆ.
ಮೋದಿಯವರು ಸೆಪ್ಟೆಂಬರ್ 24 ರಂದು ನ್ಯೂಯಾರ್ಕ್ಗೆ ಪ್ರಯಾಣ ಬೆಳೆಸಲಿದ್ದು, ಮರುದಿನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ.
ಮೋದಿ ಭಾಷಣವು ಕೋವಿಡ್ -19 ಸಾಂಕ್ರಾಮಿಕ, ಭಯೋತ್ಪಾದನೆಯನ್ನು ಎದುರಿಸುವ ಅಗತ್ಯತೆ, ಹವಾಮಾನ ಬದಲಾವಣೆ ಮತ್ತು ಇತರ ಪ್ರಮುಖ ಸಮಸ್ಯೆಗಳನ್ನು ಒಳಗೊಂಡ ಜಾಗತಿಕ ಸವಾಲುಗಳ ಮೇಲೆ ಕೇಂದ್ರೀಕೃತವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.