ಬೆಂಗಳೂರು: ಗ್ರಾಮ ಪಂಚಾಯತ್ಗಳ ಮುಖೇನ ಸರ್ಕಾರದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸುತ್ತಿದ್ದು, ಇದನ್ನು 2022 ರ ಜನವರಿ 26 ರಂದು ಐದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ನೂತನ ಯೋಜನೆ ‘ಅಮೃತ ಗ್ರಾಮ ಪಂಚಾಯತ್ ಯೋಜನೆ’ ಗೆ ವಿಧಾನಸೌಧದಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದ ಗ್ರಾಮ ಪಂಚಾಯತ್ಗಳ ಮೂಲಕವೇ ಪಿಂಚಣಿ ಸೇವೆಯನ್ನು ಒಳಗೊಂಡಂತೆ, ಇನ್ನಿತರ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು. ಪ್ರಾಯೋಗಿಕ ಹಂತದಲ್ಲಿ ಐದು ಜಿಲ್ಲೆಗಳಲ್ಲಿ ಆನ್ಲೈನ್ ಗ್ರಾಮ ಪಂಚಾಯತ್ ಮೂಲಕ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಅದಕ್ಕೆ ಅಗತ್ಯ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಿ, ಗ್ರಾಮ ಪಂಚಾಯತ್ ಮೂಲಕವೇ ಸುಲಭವಾಗಿ ಪಡೆಯುವುದು ಸಾಧ್ಯವಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಅಮೃತ ಯೋಜನೆಯಡಿ 2300 ಕೋಟಿ ರೂ. ಗಳಷ್ಟರ ಕೆಲಸ ಮಾಡಲಾಗುತ್ತದೆ. ಶಾಲೆ, ಗ್ರಂಥಾಲಯ, ತ್ಯಾಜ್ಯ ನಿರ್ವಹಣೆ ಮೊದಲಾದವುಗಳ ಅಭಿವೃದ್ಧಿ ವಿಚಾರವಾಗಿ ಒಂದು ಪಂಚಾಯತ್ಗೆ ಸುಮಾರು 100 ಕೋಟಿ ಖರ್ಚು ಮಾಡಲಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ @girirajsinghbjp ಅವರು ಇಂದು ಬೆಂಗಳೂರಿನಲ್ಲಿ ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಚಾಲನೆ ನೀಡಿದರು. ಮುಖ್ಯಮಂತ್ರಿ @BSBommai, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ @ikseshwarappa ಉಪಸ್ಥಿತರಿದ್ದರು. (1/3)@PMOIndia @MoRD_GOI @gokRDPR pic.twitter.com/bpHuksT8hm
— CM of Karnataka (@CMofKarnataka) September 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.