ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಆಡಳಿತವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸಚಿವೆ ಶಶಿಕಲಾ ಜೊಲ್ಲೆ ಅವರು ಯೋಜನೆ ರೂಪಿಸಿದ್ದಾರೆ.
ಇಲಾಖೆಗೆ ಸಂಬಂಧಿಸಿದಂತೆ ಇರುವ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಹಲವು ಉಪಕ್ರಮಗಳನ್ನು ಅನುಸರಿಸಲು ಅವರು ಸಿದ್ಧತೆ ನಡೆಸಿದ್ದಾರೆ. ಹಾಗೆಯೇ ವಿಳಂಬ ನೀತಿಯನ್ನು ಅನುಸರಿಸದಂತೆ ಅವರು ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.
ರಾಜ್ಯದ ಮುಜರಾಯಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ದೇಗುಲಗಳಲ್ಲಿ ಅರ್ಚನೆ ಮಾಡುವ ಅರ್ಚಕರು, ದೇಗುಲದ ಸಿಬ್ಬಂದಿಗಳಿಗೆ ಆರೋಗ್ಯ ರಕ್ಷಣೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ. ಅವರಿಗೆ ಆರೋಗ್ಯ ವಿಮೆ ಒದಗಿಸುವುದಾಗಿ ಸಚಿವರು ತಿಳಿಸಿದ್ದು, ಇದರಿಔದ ಸುಮಾರು 37 ಸಾವಿರ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಹಾಗೆಯೇ ಮುಜರಾಯಿ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇಗುಲಗಳ ಆಸ್ತಿ, ನಕ್ಷೆ, ದೇಗುಲದ ಸಂಪೂರ್ಣ ಮಾಹಿತಿಯನ್ನು ಆನ್ಲೈನ್ ಮೂಲಕ ಒದಗಿಸುವ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್ಮೆಂಟ್ ಸಿಸ್ಟಮ್ ಅನ್ನು ಜಾರಿಗೆ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.