ಬೆಂಗಳೂರು: ಸರ್ಕಾರ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಮುಕ್ತ ಚರ್ಚೆ ನಡೆಸಲು ಸಿದ್ಧವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಹಳ್ಳಿಯ ವಿದ್ಯಾರ್ಥಿಗಳು ಜಾಗತಿಕವಾಗಿ ಸ್ಪರ್ಧೆ ಮಾಡಬೇಕಿದೆ. ನಾವು ಈ ಸ್ಪರ್ಧೆಯನ್ನು ಒಪ್ಪಿಕೊಂಡಿದ್ದೇವೆ. ಆದರೆ ಅದಕ್ಕಾಗಿ ತಯಾರಿ ನಡೆದಿಲ್ಲ. ಎನ್ಇಪಿ ಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ಇಂತಹ ಬದಲಾವಣೆಯ ಸಂದರ್ಭದಲ್ಲಿ ಪರ ವಿರೋಧ ಚರ್ಚೆಗಳು ಸಾಮಾನ್ಯ ಎಂದು ಹೇಳಿದ್ದಾರೆ.
ಶಿಕ್ಷಣ ರಂಗದಲ್ಲಿನ ಎಲ್ಲಾ ಅಡೆತಡೆಗಳನ್ನು ದಾಟಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ಆಶಯದ ಜೊತೆಗೆ ಈ ನೀತಿಯನ್ನು ರೂಪಿಸಲಾಗಿದೆ. ಈ ಬಗ್ಗೆ ವಿವಿಧ ಆಯಾಮದಲ್ಲಿ ಮತ್ತಷ್ಟು ಚರ್ಚೆ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಸಂಬಂಧ ಯಾವುದೇ ರೀತಿಯ ಚರ್ಚೆಗೆ ಸಿದ್ಧವಿದೆ. ಮಕ್ಕಳಿಗೆ ಹಲವು ಅವಕಾಶಗಳನ್ನು, ಮುಕ್ತ ವಾತಾವರಣವನ್ನು, ಉತ್ಕೃಷ್ಟ ಕೌಶಲವನ್ನು ನೀಡುವ ನಿಟ್ಟಿನಲ್ಲಿ ಈ ನೀತಿ ಪ್ರಯೋಜನಕಾರಿಯಾಗಲಿದೆ ಎಂದು ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.