ಪಾಟ್ನಾ: ಭಾತೃತ್ವದ ಸಂಕೇತವಾದ ರಕ್ಷಾಬಂಧನ ಹಬ್ಬದ ಸಡಗರಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ವಿವಿಧ ವಿನ್ಯಾಸಗಳ ರಾಖಿಗಳು ಮಾರುಕಟ್ಟೆಗ ಲಗ್ಗೆಯಿಟ್ಟಿದ್ದು ಗ್ರಾಹಕರ ಗಮನ ಸೆಳೆಯುತ್ತಿದೆ.
ಅದರಲ್ಲೂ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವುಳ್ಳ ರಾಖಿಗೆ ಎಲ್ಲಿಲ್ಲದ ಬೇಡಿಕೆ. ಮಾರುಕಟ್ಟೆಗೆ ಆಗಮಿಸಿದ ಕೆಲವೇ ಸಮಯದಲ್ಲಿ ಮೋದಿ ರಾಖಿ ಖಾಲಿಯಾಗಿ ಬಿಡುತ್ತದೆ ಎನ್ನುತ್ತಾರೆ ವ್ಯಾಪಾರಿಗಳು.
ವಯಸ್ಕರನ್ನು ಗಮನದಲ್ಲಿಟ್ಟುಕೊಂಡು ಮೋದಿ ರಾಖಿಯನ್ನು ವಿನ್ಯಾಸಗೊಳಿಸಲಾಗಿದೆ. ಯುವ ಸಮುದಾಯ ಇದನ್ನು ಹೆಚ್ಚಾಗಿ ಖರೀದಿ ಮಾಡುತ್ತಿದೆ.
ಕೋಲ್ಕತ್ತಾದಲ್ಲಿ ಉತ್ಪಾದನೆಯಾಗುವ ಮೋದಿ ರಾಖಿ ಪಾಟ್ನಾ, ಜೈಪುರ ಮುಂತಾದ ಮಾರುಕಟ್ಟೆಗಳಿಗೆ ಆಗಮಿಸಿದ ಒಂದೇ ವಾರದಲ್ಲಿ ಸಂಪೂರ್ಣವಾಗಿ ಮಾರಾಟವಾಗಿದೆ. ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಇದರ ಬೆಲೆಯನ್ನೂ ಹೆಚ್ಚುಗೊಳಿಸಲಾಗಿದೆ. ಮೋದಿ ರಾಖಿಯೊಂದರ ಬೆಲೆ ಬರೋಬ್ಬರಿ 200 ರೂಪಾಯಿಯಾಗಿದೆ.
ಮಕ್ಕಳನ್ನು ಆಕರ್ಷಿಸಲು ಛೋಟಾ ಭೀಮ್, ಆಂಗ್ರ ಬಡ್ಸ್, ಸೂಪರ್ ಮ್ಯಾನ್ ಮುಂದಾದ ರಾಖಿಗಳನ್ನು ವಿನ್ಯಾಸಗೊಳಿಸಲಾಗಿದ್ದು, ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.