ಬೆಂಗಳೂರು: ಚಿತ್ರರಂಗದ ಬೇಡಿಕೆಯ ಮೇರೆಗೆ ರಾಜ್ಯ ಸರ್ಕಾರ ಚಿತ್ರ ಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡಿದೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ಡನ್ ಹೇರಲಾಗಿದ್ದ ಸಂದರ್ಭದಲ್ಲಿ ಚಿತ್ರಮಂದಿರಗಳನ್ನು ಮುಚ್ಚಲಾಗಿತ್ತು. ಆ ಬಳಿಕ ಕೆಲ ಸಮಯದ ಹಿಂದೆ 50% ಆಸನಗಳನ್ನು ಮಾತ್ರವೇ ಬಳಸಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು. ಇದೀಗ ಸಂಪೂರ್ಣ 100% ಆಸನ ಭರ್ತಿ ಮಾಡಿ ಚಿತ್ರ ಪ್ರದರ್ಶನ ನಡೆಸಲು ಸರ್ಕಾರ ಅನುಮತಿ ನೀಡಿದೆ. ವೀಕ್ಷಕರು ಒಂದು ಡೋಸ್ ಆದರೂ ಕೊರೋನಾ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂದು ಸಹ ಸರ್ಕಾರ ತಿಳಿಸಿದೆ.
ಈ ಸಂಬಂಧ ಕೆಲ ದಿನಗಳ ಹಿಂದಷ್ಟೇ ಸಚಿವ ಡಾ. ಕೆ. ಸುಧಾಕರ್ ಮತ್ತು ಚಿತ್ರ ನಿರ್ಮಾಪಕರ ತಂಡ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡುವ ಭರವಸೆಯನ್ನು ಸಹ ಸಚಿವರು ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.