ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅ. 1 ರಿಂದ 6 -12 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊರೋನಾ ದೃಢ ಪ್ರಮಾಣ 1% ಗಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ 6 – 12 ನೇ ತರಗತಿ ವರೆಗೆ 100% ಗಳಷ್ಟು ವಿದ್ಯಾರ್ಥಿಗಳಿಗೆ ತರಗತಿ ನಡೆಯಲಿದೆ. ಹಾಗೆಯೇ ಶನಿವಾರ ಮತ್ತು ಭಾನುವಾರಗಳಂದು ಶಾಲೆಯನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೊರೋನಾ ಪಾಸಿಟಿವಿಟಿ ದರ 1% ಗಿಂತ ಹೆಚ್ಚಿರುವ ಕಡೆಗಳಲ್ಲಿ ದಿನ ಬಿಟ್ಟು ದಿನ, ಅರ್ಧ ಪ್ರಮಾಣದ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಗೂ ಮಂಕು ಬಡಿದಿದ್ದು, ಇದೀಗ ಕೊರೋನಾ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 6 – 12 ರ ವರೆಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಲು ತೀರ್ಮಾನ ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.