ಮಂಗಳೂರು: ನವಮಂಗಳೂರು ಬಂದರನ್ನು ಸಾಗರ್ ಮಾಲಾ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಸರ್ಬಾನಂದ್ ಸೋನಾವಾಲ್ ತಿಳಿಸಿದ್ದಾರೆ.
ಅವರು ನಿನ್ನೆ ಎನ್ಎಂಪಿಟಿಯು ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತತ್ರ್ಯೋತ್ಸವದ ಅಮೃತೋತ್ಸವ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಸಾಗರ ಮಾಲಾ ಯೋಜನೆಯಡಿ ಬಂದರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತದೆ. ಫಲ್ಗುಣಿ ನದಿ ಸಮುದ್ರ ಸೇರುವ ಸ್ಥಳದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ಜಾರಿಗೊಳಿಸಲಾಗುವುದು. ಮೀನುಗಾರರ ರಕ್ಷಣೆ, ಹಿತಾಸಕ್ತಿಗಾಗಿ ಅಗತ್ಯ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಕುಳಾಯಿ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿ ಶೀಘ್ರ ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಬಂದರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ, ಮಲ್ಯ ಗೇಟ್ ನವೀಕರಣ ಸೇರಿದಂತೆ ಹಲವು ಜನೋಪಯೋಗಿ ಯೋಜನೆಗಳನ್ನು ಜೋರಿಗೊಳಿಸಲಾಗುವುದು. ಸಮುದ್ರ ಮಾರ್ಗದಲ್ಲಿ ಅಕ್ರಮ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.