ಬೆಳಗಾವಿ: ಚಳಿಗಾಲದ ಅಧಿವೇಶನವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಅದಕ್ಕೂ ಮೊದಲೇ ಸಾಧ್ಯವಾದಷ್ಟು ಪ್ರಮಾಣದಲ್ಲಿ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ. 3 ರಂದು ಸಕ್ಕರೆ ಆಯುಕ್ತರ ಕಚೇರಿಯನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಹಾಗೆಯೇ ಕಬ್ಬಿನ ಬಾಕಿ ಹಣಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ. ಮತ್ತೊಮ್ಮೆ ಸಭೆ ನಡೆಸಿ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನೆರೆ ಹಾವಳಿಗೆ ಸಂಬಂಧಿಸಿದಂತೆಯೂ ಮಾತನಾಡಿದ ಅವರು, ಈ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಇದೀಗ ವರದಿ ಸರ್ಕಾರಕ್ಕೆ ತಲುಪಿದ್ದು, ಹಣಕಾಸು ಇಲಾಖೆ ಜೊತೆಗೆ ಸಭೆ ನಡೆಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.