ನವದೆಹಲಿ: ಅಮೆರಿಕ ಪ್ರವಾಸ ಮುಗಿಸಿ ವಾಪಸ್ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರು ತುಸು ವಿರಾಮ ಕೂಡ ಪಡೆಯದೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಭಾನುವಾರ ರಾತ್ರಿ ಅವರು ನಿರ್ಮಾಣವಾಗುತ್ತಿರುವ ನೂತನ ಸಂಸತ್ ಕಟ್ಟಡದ ಆವರಣಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬಿಳಿ ಕುರ್ತಾ ಧರಿಸಿ ತಲೆಗೆ ಸೇಫ್ಟಿ ಹೆಲ್ಮೆಟ್ ಹಾಕಿಕೊಂಡು ಅವರು ಕಾರ್ಯದ ಪ್ರಗತಿಯನ್ನು ಪರಿಶೀಲಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಸುಮಾರು 971 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದ ನಿರ್ಮಾಣ ಕಾಮಗಾರಿಯ ಮೊದಲ ಹಂತದ ನೇರ ಪರಿಶೀಲನೆ ಇದಾಗಿದೆ.
ವರದಿಗಳ ಪ್ರಕಾರ ಈ ಸಂಸತ್ತು ಕಟ್ಟಡದ ನಿರ್ಮಾಣ ಕಾಮಗಾರಿ 2022ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಮೋದಿ ಎಡಬಿಡದೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ್ದರು ಮತ್ತು ಕ್ವಾಡ್ ಸಮಿಟ್ನಲ್ಲಿ ಭಾಗಿಯಾಗಿದ್ದರು.
ಭಾರತಕ್ಕೆ ಬಂದ ಬಳಿಕ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆ ಪಿ ನಡ್ಡಾ ಅವರೊಂದಿಗೆ ಸಭೆಯನ್ನು ನಡೆಸಿ ಬಳಿಕ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದರು.
ರಾತ್ರಿ ಸುಮಾರು 8.45ಕ್ಕೆ ಮೋದಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು ಮತ್ತು ಅಲ್ಲಿ ಸುಮಾರು ಒಂದು ಗಂಟೆಗಳ ಕಾಲ ಪರಿಶೀಲನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
Prime Minister Shri @narendramodi inspects construction works of the new parliament building in New Delhi. pic.twitter.com/RQdGVlGcRv
— BJP (@BJP4India) September 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.