ನವದೆಹಲಿ: “ಉಚಿತ ಲಸಿಕಾ ಅಭಿಯಾನದ ಮೂಲಕ ಭಾರತವು ಸುಮಾರು 90 ಕೋಟಿ ಲಸಿಕೆ ಡೋಸ್ಗಳನ್ನು ನೀಡಿದ್ದು, ಈ ಮೂಲಕ ದಾಖಲೆಯನ್ನು ಸೃಷ್ಟಿಸಿದೆ. ಅದಕ್ಕಾಗಿ ಪ್ರಮಾಣಪತ್ರವನ್ನು ಕೂಡ ನೀಡಲಾಗಿದೆ. ಈ ಸಾಧನೆಯ ಶ್ರೇಯಸ್ಸನ್ನು ಕೋವಿನ್ಗೆ ಸಲ್ಲಿಸಬೇಕು” ಎಂದು ಪ್ರಧಾನಿ ಮೋದಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ಗೆ ಚಾಲನೆ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.
“15 ನೇ ಆಗಸ್ಟ್ 2020 ರಂದು, ಪ್ರಧಾನಿ ಕೆಂಪು ಕೋಟೆಯ ಮೇಲೆ ನಿಂತು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಘೋಷಿಸಿದರು. ಅವರು ಇಂದು ಇದನ್ನು ಪ್ರಾರಂಭಿಸುತ್ತಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಇದು ಆರೋಗ್ಯ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತರುತ್ತದೆ ಎಂದು ನಾನು ನಂಬುತ್ತೇನೆ “ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕಾರ್ಯಕ್ರಮಕ್ಕೆ ಮುನ್ನ ಹೇಳಿದ್ದಾರೆ.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ನ ಪ್ರಾಯೋಗಿಕ ಯೋಜನೆಯನ್ನು ಕಳೆದ ವರ್ಷ ಆಗಸ್ಟ್ 15 ರಂದು ಕೆಂಪು ಕೋಟೆಯಿಂದ ಪ್ರಧಾನಿ ಘೋಷಿಸಿದ್ದರು.
ಪ್ರಸ್ತುತ, ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಆರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು (NHA) ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಯ ಮೂರನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ರಾಷ್ಟ್ರವ್ಯಾಪಿ ಜಾರಿಗೊಳಿಸುತ್ತಿದೆ.
ಪಿಎಂಒ ಪ್ರಕಾರ, ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ವ್ಯಾಪಕ ಶ್ರೇಣಿಯ ಡೇಟಾ, ಮಾಹಿತಿ ಮತ್ತು ಮೂಲಸೌಕರ್ಯ ಸೇವೆಗಳನ್ನು ಒದಗಿಸುವ ಮೂಲಕ ತಡೆರಹಿತ ಆನ್ಲೈನ್ ಪ್ಲಾಟ್ಫಾರ್ಮ್ ಅನ್ನು ರಚಿಸುತ್ತದೆ, ಮುಕ್ತವಾಗಿ, ಪರಸ್ಪರ ಕಾರ್ಯನಿರ್ವಹಿಸಬಹುದಾದ, ಮಾನದಂಡ ಆಧಾರಿತ ಡಿಜಿಟಲ್ ವ್ಯವಸ್ಥೆಗಳನ್ನು ಭದ್ರತೆ, ವೈಯಕ್ತಿಕ ಗೌಪ್ಯತೆ ಮತ್ತು ಆರೋಗ್ಯದ ಗೌಪ್ಯತೆಯನ್ನು ಖಾತ್ರಿಪಡಿಸುತ್ತದೆ.
ಪ್ರತಿಯೊಬ್ಬ ನಾಗರಿಕನಿಗೂ ಒಂದು ಆರೋಗ್ಯ ID ಯನ್ನು ಇದು ಒಳಗೊಂಡಿರುತ್ತದೆ, ಅದು ಅವರ ಆರೋಗ್ಯ ಖಾತೆಯಂತೆಯೂ ಕೆಲಸ ಮಾಡುತ್ತದೆ, ಇದಕ್ಕೆ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಲಿಂಕ್ ಮಾಡಬಹುದು ಮತ್ತು ಮೊಬೈಲ್ ಅಪ್ಲಿಕೇಶನ್ ಸಹಾಯದಿಂದ ಇದನ್ನು ನೋಡಬಹುದು.
कोरोना काल में टेलिमेडिसिन का भी अभूतपूर्व विस्तार हुआ है।
ई-संजीवनी के माध्यम से अब तक लगभग सवा करोड़ रिमोट कंसल्टेशन पूरे हो चुके हैं।
ये सुविधा हर रोज देश के दूर-सुदूर में रहने वाले हजारों देशवासियों को घर बैठे ही शहरों के बड़े अस्पतालों के डॉक्टरों से कनेक्ट कर रही है। pic.twitter.com/3PJ3KzVIsW
— BJP (@BJP4India) September 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.