ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಸ್ತಬ್ಧವಾಗಿದ್ದ ಹೆಚ್ಚಿನ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸೋಂಕು ಹೆಚ್ಚಾಗುವ ಭೀತಿಯೂ ಇದೆ. ರಾಜ್ಯ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡುತ್ತಿದ್ದು, ಮೂರನೇ ಅಲೆ ತಡೆಗೆ ಸಂಪೂರ್ಣ ಸನ್ನದ್ಧವಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಮೂರನೇ ಅಲೆ ಗಂಭೀರ ಪರಿಣಾಮ ಬೀರಬಹುದು ಅಥವಾ ಬೀರದೇ ಇರಬಹುದು. ಏನೇ ಆದರೂ ಅದಕ್ಕಾಗಿ ಸಂಪೂರ್ಣ ಸನ್ನದ್ಧವಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ವ್ಯವಸ್ಥೆಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಶಾಲೆಗಳಲ್ಲಿಯೂ ಕೊರೋನಾ ಮಾರ್ಗಸೂಚಿಗಳ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಪೋಷಕರು ಭಯ ಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದ್ದಾರೆ. ದೊಡ್ಡ ಮಟ್ಟದಲ್ಲಿ ಲಸಿಕೀಕರಣವೂ ನಡೆಯುತ್ತಿದ್ದು, ಕೊರೋನಾ ನಿಯಂತ್ರಣಕ್ಕಾಗಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.