ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಬಲೂಚ್ ಹೋರಾಟ ತೀವ್ರತೆ ಪಡೆದುಕೊಂಡಿದೆ. ಗ್ವಾದರ್ನಲ್ಲಿರುವ ಮೊಹಮ್ಮದ್ ಅಲಿ ಜಿನ್ನಾ ಅವರ ಪ್ರತಿಮೆಯನ್ನು ಬಾಂಬ್ ದಾಳಿಯಿಂದ ನಾಶಪಡಿಸಲಾಗಿದ್ದು, ಈ ಕೃತ್ಯವನ್ನು ನಿಷೇಧಿತ ಬಲೂಚ್ ಲಿಬ್-ರೇಶನ್ ಆರ್ಮಿ ತಾನು ಮಾಡಿರುವುದಾಗಿ ಹೇಳಿಕೊಂಡಿದೆ ಎಂದು ಪಾಕಿಸ್ತಾನದ ಮಾಧ್ಯಮ ವರದಿ ಮಾಡಿದೆ.
ಈ ಪ್ರತಿಮೆಯನ್ನು ಈ ವರ್ಷದ ಆರಂಭದಲ್ಲಿ ಸುರಕ್ಷಿತ ವಲಯ ಎಂದು ಕರೆಯಲಾದ ಮರೀನ್ ಡ್ರೈವ್ನಲ್ಲಿ ಸ್ಥಾಪಿಸಲಾಗಿತ್ತು.
ಅಧಿಕೃತ ಮೂಲಗಳ ಪ್ರಕಾರ, ಕೆಲವರು ಪ್ರತಿಮೆಯ ಕೆಳಗೆ ಸ್ಫೋಟಕ ಸಾಧನವನ್ನು ಇಟ್ಟಿದ್ದಾರೆ ಮತ್ತು ಭಾನುವಾರ ಅದನ್ನು ಸ್ಫೋಟಿಸಿದ್ದಾರೆ ಎಂದು ಹೇಳಿದೆ.
ಪ್ರತಿಮೆಯನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬಾಂಬ್ ನಿಷ್ಕ್ರಿಯ ದಳವು ಘಟನೆಯ ಬಗ್ಗೆ ತನಿಖೆ ನಡೆಸಿದೆ.
ಈ ಹಿಂದೆ, ಸೆಪ್ಟೆಂಬರ್ 25 ರಂದು ಬಲೂಚಿಸ್ತಾನದಲ್ಲಿ ಪಾಕಿಸ್ತಾನದ ನಾಲ್ಕು ಭದ್ರತಾ ಸಿಬ್ಬಂದಿಯ ಸಾವಿಗೆ ಕಾರಣವಾದ ಬಾಂಬ್ ದಾಳಿಯ ಹೊಣೆಯನ್ನು ಬಲೂಚ್ ಲಿಬರೇಶನ್ ಆರ್ಮಿ ಹೊತ್ತುಕೊಂಡಿತ್ತು.
ಹರ್ನಾಯ್ ಜಿಲ್ಲೆಯ ಖೋಸಾಟ್ ಪ್ರದೇಶದಲ್ಲಿ ಗಡಿನಾಡು ದಳದ ವಾಹನದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು ಮತ್ತು ಇನ್ನಿಬ್ಬರು ಗಾಯಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.