ಹುಬ್ಬಳ್ಳಿ: ಕೈಗಾರಿಕಾ ಪ್ರದೇಶಗಳಲ್ಲಿಯೇ ವಸತಿ ಸೌಕರ್ಯಗಳನ್ನು ಕಲ್ಪಿಸಲು ಕೈಗಾರಿಕಾ ಪ್ರದೇಶದ 10% ಗಳಷ್ಟು ಪ್ರದೇಶವನ್ನು ಟೌನ್ಶಿಪ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಇಂದು ಕೈಗಾರಿಕಾ ಉದ್ಯಮಿಗಳ ಜೊತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉದ್ಯಮದ ಸಮೀಪದಲ್ಲಿಯೇ ವಸತಿ ಯೋಜನೆ ಇದ್ದರೆ ಹೆಚ್ಚು ಸಹಕಾರಿ ಆಗಲಿದೆ. ಈ ಹಿನ್ನೆಲೆಯಲ್ಲಿ ಕೈಗಾರಿಕಾ ಟೌನ್ಶಿಪ್ ನಿರ್ಮಾಣಕ್ಕೆ ಚಿಂತನೆ ಮಾಡಲಾಗುತ್ತಿರುವುದಾಗಿ ಹೇಳಿದ್ದಾರೆ.
2020- 25 ರ ಕೈಗಾರಿಕಾ ನೀತಿಯಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಲಾಗುತ್ತದೆ. ಕೈಗಾರಿಕಾ ನಿವೇಶನ ಪಡೆದು 51% ಉದ್ದೇಶಿತ ಕಟ್ಟಡ ನಿರ್ಮಿಸಿದರೆ ಸೇಲ್ ಡೀಡ್ ನೀಡಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. 99 ವರ್ಷಗಳ ಲೀಸ್ ರದ್ದುಗೊಳಿಸಿ ಸೇಲ್ ಡೀಡ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ತುಮಕೂರು, ಧಾರವಾಡ, ಯಾದಗಿರಿಗಳಲ್ಲಿ ಕೈಗಾರಿಕಾ ಕಾರಿಡಾರ್ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.