ಬೆಂಗಳೂರು: ರಾಜ್ಯದ ಆರು ಸ್ಥಳಗಳಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಪ್ರಸ್ತುತ ಬೆಂಗಳೂರಿನಲ್ಲಿ ಮಾತ್ರವೇ ಎಫ್ಎಸ್ಐಎಲ್ ಇದ್ದು, ಬಹಳಷ್ಟು ಪ್ರಕರಣಗಳ ತನಿಖೆ ನಡೆಯುವ ಸಂದರ್ಭದಲ್ಲಿ ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಮತ್ತು ಬೆಂಗಳೂರು ವಿಧಿ ವಿಜ್ಞಾನ ಪ್ರಯೋಗಾಲಯದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಎಫ್ಎಸ್ಐಎಲ್ ಆರಂಭಿಸಲು ನಿರ್ಧರಿಸಲಾಗಿದೆ.
ಹಾಗೆಯೇ ಪೊಲೀಸರಿಗೆ ಅಪರಾಧ ಪ್ರಕರಣಗಳ ತ್ವರಿತ ತನಿಖೆಗೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ತೆರೆಯಲಾಗುವುದು ಎಂದು ಸರ್ಕಾರ ತಿಳಿಸಿದೆ. ಮೊದಲ ಹಂತದಲ್ಲಿ ಕಲ್ಬುರ್ಗಿ, ಹುಬ್ಬಳ್ಳಿ, ಧಾರವಾಡಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಲ್ಯಾಬ್ಗಳನ್ನು ಆರಂಭಿಸಲಾಗುವುದು ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.