ನವದೆಹಲಿ: ಅಂತರಾಷ್ಟ್ರೀಯ ಪರಮಾಣುಶಕ್ತಿ ಸಂಸ್ಥೆ(ಐಎಇಎ)ಗೆ ಭಾರತವು ಬಾಹ್ಯ ಲೆಕ್ಕ ಪರಿಶೋಧಕನಾಗಿ ಆಯ್ಕೆಯಾಗಿದೆ. 2022-27ರವರೆಗೆ ಭಾರತ ಈ ಸ್ಥಾನದಲ್ಲಿ ಇರಲಿದೆ.
ಭಾರತೀಯ ನಿಯಂತ್ರಕರು ಮತ್ತು ಲೆಕ್ಕ ಪರಿಶೋಧನಾ ಸಂಸ್ಥೆಯ (ಸಿಎಜಿ) ಮಹಾನಿರ್ದೇಶಕರಾದ ಗಿರೀಶ್ ಚಂದ್ರ ಮುರ್ಮು ಅವರು ಬಾಹ್ಯ ಪರಿಶೋಧಕರಾಗಿ ಈ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಕಳೆದ ಆಗಸ್ಟ್ 8ರಂದು ಇವರು ಸಿಎಜಿ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಅದಕ್ಕೂ ಮೊದಲು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಮಾತ್ರವಲ್ಲದೆ ಕೇಂದ್ರ ಸರ್ಕಾರದ ವೆಚ್ಚಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ, ಕಂದಾಯ ಮತ್ತು ಹಣಕಾಸು ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
ವಿಯೆನ್ನಾದಲ್ಲಿ ನಡೆದ ಸಮ್ಮೇಳನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿಶ್ವದ ನಾನಾ ದೇಶಗಳು ಬಾಹ್ಯ ಲೆಕ್ಕ ಪರಿಶೋಧಕರಾಗಲು ಬಿಡ್ ಹಾಕಿದ್ದವು. ಆದರೆ ಅಂತಿಮವಾಗಿ ಭಾರತ ಜರ್ಮನಿ ಮತ್ತು ಟರ್ಕಿಯನ್ನು ಸೋಲಿಸಿ ಈ ಹುದ್ದೆಯನ್ನು ತನ್ನದಾಗಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.