ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರವು 2025 ರ ವೇಳೆಗೆ ಅತ್ಯುತ್ತಮ ಸ್ಥಾನ ಹೊಂದುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ನ್ನು ರೂಪಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರೋತ್ಸಾಹ ಧನ, ರಿಯಾಯಿತಿಗಳನ್ನು ನೀಡಲು ಸರ್ಕಾರವು 500 ಕೋಟಿ ರೂ. ಕಾಯ್ದಿರಿಸಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ಫೆಬ್ರವರಿ ತಿಂಗಳಲ್ಲಿ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಸಹಯೋಗದೊಂದಿಗೆ ‘ಕರ್ನಾಟಕ ಅಂತರಾಷ್ಟ್ರೀಯ ಪ್ರವಾಸೋದ್ಯಮ ಎಕ್ಸ್ಪೋ’ ಆಯೋಜನೆ ಮಾಡಲಾಗುತ್ತದೆ. ಮೂರು ದಿನಗಳ ಕಾಲ ನಡೆಯುವ ಹೂಡಿಕೆದಾರರ ಸಮ್ಮೇಳನದಲ್ಲಿ ದೊಡ್ಡ ಮೊತ್ತದ ಹೂಡಿಕೆಗಳನ್ನು ಸಹ ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ನೀತಿಯಿಂದ ಸುಮಾರು ಐದು ಸಾವಿರ ಕೋಟಿ ರೂ. ಗಳಷ್ಟು ಹೂಡಿಕೆ, ಒಂದು ಮಿಲಿಯನ್ ನೇರ, ಪರೋಕ್ಷ ಉದ್ಯೋಗಗಳ ಸೃಷ್ಟಿ ಸಹ ಸಾಧ್ಯವಿದೆ. 17 ಸಾವಿರಕ್ಕೂ ಹೆಚ್ಚು ಪ್ರವಾಸೋದ್ಯಮ ಯೋಜನೆಗಳು ಮತ್ತು ಸೇವೆಗಳು ಈ ನೀತಿಯ ಲಾಭವನ್ನು ಪಡೆಯಲಿದೆ. ಹಾಗೆಯೇ ಪ್ರವಾಸೋದ್ಯಮ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೂ ಈ ನೀತಿ ಪೂರಕವಾಗಿರಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.