ಮಂಗಳೂರು: ಮೀನುಗಾರಿಕೆಗೆ ತೆರಳುವ ಯಾಂತ್ರೀಕೃತ ಬೋಟ್ಗಳಲ್ಲಿ ದ್ವಿಮುಖ ಸಂಪರ್ಕ ಸಾಧನ ಅಳವಡಿಕೆ ಕಡ್ಡಾಯಗೊಳಿಸಲಾಗುವುದು ಎಂದು ಸಚಿವ ಅಂಗಾರ ತಿಳಿಸಿದ್ದಾರೆ.
ಅಗತ್ಯವಿರುವ ಬ್ಯಾಟರಿಯನ್ನು ಸೋಲಾರ್ ಮೂಲಕ ರಿಚಾರ್ಜ್ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ಮಾಡುವಂತೆಯೂ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೀನುಗಾರರ ಸುರಕ್ಷತೆ ಸರ್ಕಾರದ ಆದ್ಯತೆ. ಸಮುದ್ರದಲ್ಲಿ ಬಹುದೂರ ತೆರಳಿ ಮೀನುಗಾರಿಕೆ ನಡೆಸುವವರ ಬೋಟುಗಳ ಸ್ಥಿತಿಗತಿಗಳನ್ನು ಅವಲೋಕಿಸುವ ಮತ್ತು ಮೀನುಗಾರರ ಸುರಕ್ಷತಾ ದೃಷ್ಟಿಯಿಂದ ದ್ವಿಮುಖ ಸಂವಹನ ಸಂಪರ್ಕ ಸಾಧನ ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದಕ್ಕಾಗಿ ಬೋಟ್ಗಳ ಮೇಲೆ ಕವಚದಂತಹ ಸೋಲಾರ್ ಫಲಕಗಳನ್ನು ಅಳವಡಿಸುವ ಸಾಧ್ಯತೆಗಳ ಬಗೆಗೂ ಪರಿಶೀಲಿಸಲಾಗುವುದು. ಈ ಸಾಧನದಲ್ಲಿ ಕಂಡುಬರುವ ತಾಂತ್ರಿಕ ದೋಷಗಳ ನಿವಾರಣೆಗೆ ತಜ್ಞರ ಸಮಿತಿ ರಚಿಸಿ, ಪರಿಹಾರ ಕಂಡುಕೊಳ್ಳುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.