ಮೈಸೂರು: ಪೊಲೀಸರಿಂದ ನಡೆಯುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ವ್ಯವಸ್ಥೆ ಕಲ್ಪಿಸುವ ವಾತಾವರಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಪೊಲೀಸರು ದೌರ್ಜನ್ಯ ಎಸಗಿದ ಸಂದರ್ಭದಲ್ಲಿ ಅವರ ವಿರುದ್ಧ ದೂರು ನೀಡುವುದಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಯೇ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ, ಸಂತ್ರಸ್ತರಿಗೆ ನೆರವಾಗಲಾಗುವುದು ಎಂದು ಅವರು ತಿಳಿಸಿದ್ದಾರೆ.
ಠಾಣೆಗೆ ನ್ಯಾಯ ಬಯಸಿ ಬಂದವರ ಮೇಲೆ ಕೆಲ ಪೊಲೀಸರು ದೌರ್ಜನ್ಯ ನಡೆಸುವ ಸುದ್ದಿಗಳು ಕೇಳಿ ಬರುತ್ತಿವೆ. ಹಾಗೆಯೇ, ನೊಂದವರನ್ನು ಹೆದರಿಹಿ, ಬೆದರಿಸಿ ಅವರ ಮೇಲೆ ಪೊಲೀಸರಿಂದ ದೌರ್ಜನ್ಯಗಳಂತಹ ವಿಚಾರಗಳು ಸಹ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಅರೋಪಿಗಳ ವಿರುದ್ಧ ದೂರು ನೀಡಲು ಸಾರ್ವಜನಿಕರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.