ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ದಿನಾಂಕ ಘೋಷಣೆಯಾಗಿದ್ದು, ಸಾಮೂಹಿಕ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಉದಾಸಿ ಅವರ ನಿಧನದಿಂದ ತೆರವಾದ ಹಾನಗಲ್ ಕ್ಷೇತ್ರ ಮತ್ತು ಮನಗುಳಿ ಅವರ ನಿಧನದಿಂದ ತೆರವಾಗಿರುವ ಸಿಂದಗಿ ಕ್ಷೇತ್ರದ ಉಪ ಚುನಾವಣೆಗಳನ್ನು ನನ್ನ ನಾಯಕತ್ವದಲ್ಲಿ ಅಲ್ಲ, ಪಕ್ಷದ ನಾಯಕತ್ವದಲ್ಲಿಯೇ ಎದುರಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೊನ್ನೆಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಎರಡು ಕ್ಷೇತ್ರಗಳಿಗೂ ವೀಕ್ಷಕರನ್ನು ಕಳುಹಿಸಿ ಕೊಡುತ್ತೇವೆ. ಅಭ್ಯರ್ಥಿ ಆಯ್ಕೆಯ ಬಗ್ಗೆ ಅಲ್ಲಿನ ಸ್ಥಳೀಯರಿಂದ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಎರಡು ಕ್ಷೇತ್ರಗಳಲ್ಲಿಯೂ ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.