ಬೆಂಗಳೂರು: ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ ಸಮರ್ಪಕ ಅನುಷ್ಠಾನಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಶೀಘ್ರದಲ್ಲೇ ಮೂರು ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅಧ್ಯಕ್ಷತೆಯಲ್ಲಿ, ಇನ್ಫೋಸಿಸ್ ಅಧಿಕಾರಿಗಳ ಜೊತೆಗೆ ನಡೆಸಲಾದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಇದರನ್ವಯ ಕಾಲೇಜು ವಿದ್ಯಾರ್ಥಿಗಳಿಗೆ ಕೌಶಲ ಕಲಿಸುವ ಮೂರು ಸಾವಿರಕ್ಕೂ ಅಧಿಕ ಕೋರ್ಸ್ಗಳಿರುವ ‘ಇನ್ಫೋಸಿಸ್ ಸ್ಟ್ರಿಂಗ್ ಬೋರ್ಡ್’ ಬಳಕೆ, ಕಾಲೇಜು ಉಪನ್ಯಾಸಕರಿಗೆ ಡಿಜಿಟಲ್ ತರಬೇತಿ, ಉದ್ಯೋಗ ಸಂಬಂಧ ಮಾರ್ಗದರ್ಶನ ನೀಡಲು ‘ಕ್ಯಾಂಪಸ್ ಕನೆಕ್ಟ್’ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳಿಗೆ ಇನ್ಫೋಸಿಸ್ ವತಿಯಿಂದ 15 ಸಾವಿರ ಡಿಬಾಂಡೆಡ್ ಕಂಪ್ಯೂಟರ್ಗಳನ್ನು ಸಂಸ್ಥೆ ಒದಗಿಸಲಿದೆ.
ಈ ಒಡಂಬಡಿಕೆಯ ಭಾಗವಾಗಿ ಸಂಸ್ಥೆಗಳ ಮಧ್ಯೆ ಉತ್ಕೃಷ್ಟ ಕ್ರಮಗಳ ವಿನಿಮಯಕ್ಕೆ ಎನ್ಇಪಿ ಕಮ್ಯುನಿಟಿಯನ್ನು ಸ್ಥಾಪಿಸಲಾಗುವುದು ಎಂದು ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.