ಬೆಂಗಳೂರು: ನಗರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ, ಮುಂದಿನ ಏಳೆಂಟು ತಿಂಗಳುಗಳೊಳಗಾಗಿ, ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿಯಲ್ಲಿ 46,499 ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈಗಾಗಲೇ ಸುಮಾರು 316 ಎಕರೆ ಪ್ರದೇಶಗಳಲ್ಲಿ ಈ ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಹರಾಜಿಗೆ ಗುರುತು ಮಾಡಲಾಗಿದ್ದ ಜಾಗಗಳಲ್ಲಿ ಮನೆಗಳ ನಿರ್ಮಾಣ ಆಗುತ್ತಿದೆ. ಮೂಲಸೌಕರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 500 ಕೋಟಿ ರೂ. ಗಳನ್ನು ಈಗಾಗಲೇ ಒದಗಿಸಿದ್ದಾರೆ. ಫ್ಲ್ಯಾಟ್ಗೆ 9 ಲಕ್ಷ ರೂ. ಗಳನ್ನು ನಿಗದಿ ಮಾಡಲು ಚಿಂತಿಸಲಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಣಯಕ್ಕೆ ಬರಲಾಗುತ್ತದೆ ಎಂದು ಹೇಳಿದ್ದಾರೆ.
ಈ ಯೋಜನೆಯಲ್ಲಿ ನಿರ್ಮಾಣವಾದ ಮನೆಗಳ ಪೈಕಿ ಸ್ಥಳೀಯರಿಗೆ 50% ಮನೆಗಳನ್ನು ಕಾಯ್ದಿರಿಸಲಾಗುವುದು. ಅವುಗಳನ್ನು ಕೋರಿಕೆ ಮೇರೆಗೆ ಹಂಚಿಕೆ ಮಾಡಲಾಗುತ್ತದೆ. ಇದನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರತಿ ತಿಂಗಳು ನಗರದ ಸಚಿವರು, ಶಾಸಕರ ಜೊತೆ ಸಭೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.