ನವದೆಹಲಿ: ಶ್ರೀಲಂಕಾ ಬುಧವಾರ ಚೀನಾದ ಸುಮಾರು 96,000 ಟನ್ಗಳಷ್ಟು ರಸಗೊಬ್ಬರ ಸಾಗಣೆಯನ್ನು ನಿಲ್ಲಿಸಿದೆ. ಕಳಪೆ ಗುಣಮಟ್ಟದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶ್ರೀಲಂಕಾದ ಕೃಷಿ ಅಧಿಕಾರಿಗಳು ಚೀನಾದಲ್ಲಿ ತಯಾರಿಸಿದ ಸಾವಯವ ಗೊಬ್ಬರಗಳಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾವನ್ನು ಪತ್ತೆ ಮಾಡಿದ ಹಿನ್ನೆಲೆಯಲ್ಲಿ ಅದರ ಆಮದಿಗೆ ನಿಷೇಧ ಹೇರಲಾಗಿದೆ.
ಚೀನಾದೊಂದಿಗಿನ ರಸಗೊಬ್ಬರ ಒಪ್ಪಂದವನ್ನು ರದ್ದುಗೊಳಿಸುವಂತೆ ಕೃಷಿ ನಿರ್ದೇಶನಾಲಯ ಶ್ರೀಲಂಕಾ ಸರ್ಕಾರವನ್ನು ಒತ್ತಾಯಿಸಿತ್ತು.
ಚೀನಾದ ಕಿಂಗ್ಡಾವೊ ಸೀವಿನ್ ಬಯೋಟೆಕ್ ಗ್ರೂಪ್ ಕೋ ಲಿಮಿಟೆಡ್ ನಿಂದ ಶ್ರೀಲಂಕಾ 63 ಮಿಲಿಯನ್ ಡಾಲರ್ ವೆಚ್ಚದಲ್ಲಿ 99,000 ಮೆಟ್ರಿಕ್ ಟನ್ ಸಾವಯವ ಗೊಬ್ಬರವನ್ನು ಆಮದು ಮಾಡಿಕೊಳ್ಳಬೇಕಿತ್ತು. ಆದರೆ ಅದರಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಪತ್ತೆ ಮಾಡಿದ ಹಿನ್ನೆಲೆಯಲ್ಲಿ ಆಮದನ್ನು ಸ್ಥಗಿತಗೊಳಿಸಲಾಗಿದೆ ಎಂದು ಶ್ರೀಲಂಕಾ ಕೃಷಿ ಸಚಿವ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.