ಬೆಂಗಳೂರು: ಬಾದಾಮಿಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
2021 – 22 ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಈ ಅನುಮೋದನೆ ನೀಡಲಾಗಿದೆ. ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಬಿ. ವೆಂಕಟೇಶ್ ಮೂರ್ತಿ ಅವರು ನಡಾವಳಿ ಹೊರಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡದಲ್ಲಿ ನೇಕಾರರ ಜೀವನೋಪಾಯ ವೃದ್ಧಿಸಲು, ಉತ್ತೇಜನ, ಉದ್ಯೋಗಾವಕಾಶಗಳ ಸೃಷ್ಟಿಗೆ ಈ ಯೋಜನೆ ಪ್ರಾಮುಖ್ಯತೆ ಪಡೆದಿದೆ. ಹಾಗೆಯೇ, ಇಲ್ವಿನ ಜನರು ಗುಳೆ ಹೋಗುವುದನ್ನು ತಡೆಗಟ್ಟಲು ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಜವಳಿ ಪಾರ್ಕ್ ಆರಂಭಿಸುವುದಾಗಿ ಈ ಹಿಂದೆ ಘೋಷಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.