ಬೆಂಗಳೂರು: ವಿಜಯನಗರ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ. 2 ರಂದು ಸಂಜೆ 6 ಕ್ಕೆ ಉದ್ಘಾಟಿಸಲಿದ್ದಾರೆ.
ವಿಜಯನಗರ ಜಿಲ್ಲೆ ರಚನೆ ಮತ್ತು ಘೋಷಣೆಗೆ ಕಾರಣೀಕರ್ತರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ವಿಜಯನಗರ ಜಿಲ್ಲೆಯ ಹೋರಾಟಕ್ಕೆ ಕೈಜೋಡಿಸಿದ ಮಠಾಧೀಶರು ಸೇರಿದಂತೆ ನಾಡಿನ ವಿವಿಧ ಮಠಾಧೀಶರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಸಂಸದರು ಮತ್ತು ಶಾಸಕರು,ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.