ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಲಡಾಖ್ ಸೆಕ್ಟರ್ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ ಎಂದು ರಕ್ಷಣಾ ಮೂಲಗಳು ಶುಕ್ರವಾರ ಮಾಹಿತಿ ನೀಡಿವೆ.
ತನ್ನ ಭೇಟಿಯ ಸಮಯದಲ್ಲಿ, ನರವಾಣೆ ಅವರು ಲಡಾಖ್ ವಲಯದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ.
ಅವರು ಈ ವಲಯದಲ್ಲಿ ನಿಯೋಜಿಸಲಾಗಿರುವ ಸೈನಿಕರೊಂದಿಗೆ ಸಂವಾದನ್ನು ಕೂಡ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ಜನರಲ್ ಎಂಎಂ ನರವಾಣೆ ಸಿಒಎಎಸ್ ಲಡಾಖ್ ಸೆಕ್ಟರ್ಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ, ಪ್ರಸ್ತುತ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಲು ಅವರು ಈ ಭೇಟಿ ನೀಡಿದ್ದಾರೆ. ಕಠಿಣ ಭೂಪ್ರದೇಶ ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿ ನಿಯೋಜಿಸಲಾಗಿರುವ ಸೈನಿಕರೊಂದಿಗೆ ಅವರು ಸಂವಾದ ನಡೆಸಲಿದ್ದಾರೆ” ಎಂದು ಭಾರತೀಯ ಸೇನೆಯು ಟ್ವೀಟ್ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.