ನವದೆಹಲಿ: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಆರಂಭಗೊಂಡ ಜಲಜೀವನ ಮಿಷನ್ ಮಹತ್ವದ ಮೈಲುಗಲ್ಲು ಸಾಧಿಸಿದೆ. 2019 ರಿಂದ ಇದುವರೆಗೆ ಸುಮಾರು 5 ಕೋಟಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ.
2019ರ ಆಗಸ್ಟ್ ತಿಂಗಳಲ್ಲಿ ಆರಂಭಗೊಂಡ ಜಲಜೀವನ ಮಿಷನ್ 25 ತಿಂಗಳಲ್ಲಿ ಸುಮಾರು 5 ಕೋಟಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕವನ್ನು ಕಲ್ಪಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
2024 ರ ವೇಳೆಗೆ ದೇಶದ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕವನ್ನು ಒದಗಿಸುವ ಗುರಿಯೊಂದಿಗೆ 2019ರ ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿಯವರು ಜನಜೀವನ ಮಿಷನ್ ಅನ್ನು ಘೋಷಣೆ ಮಾಡಿದ್ದರು.
2019ರಲ್ಲಿ ಗ್ರಾಮೀಣ ಪ್ರದೇಶದ 18.93 ಕೋಟಿ ಮನೆಗಳ ಪೈಕಿ ಕೇವಲ 3.23 ಕೋಟಿ ಮನೆಗಳು ಅಂದರೆ 17 ಶೇಕಡಾ ಮನೆಗಳು ನಲ್ಲಿ ನೀರಿನ ಸಂಪರ್ಕ ಹೊಂದಿದ್ದವು.
2024ರ ವೇಳೆಗೆ 15.70 ಕೋಟಿ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸಲಾಗುವುದು ಎಂದು ಸರಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.