ಜೈಪುರ: ಕೇಂದ್ರ ಸರ್ಕಾರವು ದೇಶದಲ್ಲಿ 127 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ, ಅದರಲ್ಲಿ 23 ರಾಜಸ್ಥಾನದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
“ಕೇಂದ್ರವು ದೇಶದಲ್ಲಿ 127 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ ಮತ್ತು ಅವು ನಿರ್ಮಾಣ ಹಂತದಲ್ಲಿದೆ. ರಾಜಸ್ಥಾನದಲ್ಲಿ 23 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ರಾಜಸ್ಥಾನದ 23 ಕಾಲೇಜುಗಳಲ್ಲಿ2600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ” ಎಂದಿದ್ದಾರೆ.
ನಾವು ದೇಶದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ವೇಗವಾಗಿ ಹೆಚ್ಚಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಹಿಂದೆ, ವೈದ್ಯಕೀಯ ಕ್ಷೇತ್ರವು ಆರೋಗ್ಯದೊಂದಿಗೆ ಮತ್ತು ಆರೋಗ್ಯವು ಅಭಿವೃದ್ಧಿಯೊಂದಿಗೆ ಎಂದಿಗೂ ಸಂಬಂಧ ಹೊಂದಿರಲಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ವೈದ್ಯಕೀಯ ಕ್ಷೇತ್ರ ಮತ್ತು ಅಭಿವೃದ್ಧಿಯ ಸಂಪರ್ಕ ಆರಂಭವಾಯಿತು”ಎಂದು ಮಾಂಡವೀಯ ಹೇಳಿದ್ದಾರೆ.
“ಗುಜರಾತ್ನ ಮೂಲೆ ಮೂಲೆಯ ಜನರಿಗೆ ಉಚಿತ ಚಿಕಿತ್ಸೆ ನೀಡಲು ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರವು ಮಾ ಅಮೃತಂ ಯೋಜನೆಯಡಿ ಒಂದು ಕಾರ್ಡ್ ಅನ್ನು ಒದಗಿಸಿದೆ. ಈಗ ಇದನ್ನು ಆಯುಷ್ಮಾನ್ ಭಾರತ್ ಯೋಜನೆಯಾಗಿ ರಾಷ್ಟ್ರವ್ಯಾಪಿ ಜಾರಿಗೆ ತರಲಾಗಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.