ನವದೆಹಲಿ: ಯುಕೆ ಯಾವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುತ್ತದೆಯೋ ಅದೇ ಭಾಷೆಯಲ್ಲಿ ಭಾರತ ಉತ್ತರ ನೀಡಿದೆ. ಕೋವಿಡ್ ಲಸಿಕೆ ಮತ್ತು ಕೋವಿಡ್ -19 ಪ್ರೋಟೋಕಾಲ್ಗಳಿಗೆ ಸಂಬಂಧಿಸಿದಂತೆ ಯುಕೆಯಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಬ್ರಿಟಿಷ್ ಪ್ರಜೆಗಳ ಮೇಲೆ ನಿರ್ಬಂಧ ವಿಧಿಸಲು ನಿರ್ಧರಿಸಿದೆ.
“ನಮ್ಮ ಹೊಸ ನಿಯಮಾವಳಿಗಳು ಅಕ್ಟೋಬರ್ 4 ರಿಂದ ಜಾರಿಗೆ ಬರಲಿವೆ” ಎಂದು ಸರ್ಕಾರದ ಮೂಲವೊಂದು ಹೇಳಿದೆ ಮತ್ತು ಯುಕೆಯಿಂದ ಬರುವ ಎಲ್ಲಾ ಯುಕೆ ಪ್ರಜೆಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದಿದೆ.
ಅಕ್ಟೋಬರ್ 4, ಸೋಮವಾರದಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಬ್ರಿಟಿಷ್ ನಾಗರಿಕರು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ. ಕೋವಿಡ್ ಲಸಿಕೆ ಪಡೆದಿದ್ದಾರೆ ಅಥವಾ ಇಲ್ಲವೋ ಎಂಬುದನ್ನು ಲೆಕ್ಕಿಸದೆ ಎಲ್ಲರೂ ಕಡ್ಡಾಯವಾಗಿ ಕ್ವಾರಂಟೈನ್ಗೆ ಒಳಪಡಬೇಕಾಗುತ್ತದೆ” ಎಂದಿದೆ.
ಪ್ರಯಾಣಕ್ಕೆ 72 ಗಂಟೆಗಳ ಮೊದಲು ಕೋವಿಡ್ -19 ಆರ್ಟಿ-ಪಿಆರ್ಸಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಕೋವಿಡ್ -19 ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಎಂಬ ನಿಯಮ ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.