ಧಾರವಾಡ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಆರ್ಎಸ್ಎಸ್ ಅಂದರೆ ಏನು ಗೊತ್ತು? ಓಟ್ ಬ್ಯಾಂಕ್ಗಾಗಿ ಅವರು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ದೇಶದ ಜನರಿಗೆ ಆರ್ಎಸ್ಎಸ್, ಬಿಜೆಪಿ ಏನು ಎಂದು ತಿಳಿದಿದೆ. ಆ ಬಗ್ಗೆ ಸಿದ್ದರಾಮಯ್ಯ ಹೇಳುವ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಐಎಸ್ಐ ಏಜೆಂಟ್ ಎಂದರೆ ಅವರ ಪ್ರತಿಕ್ರಿಯೆ ಹೇಳಿರುತ್ತದೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧೋಗತಿಗೆ ಇಳಿದಿದೆ. ಇವರು ಸುಧಾರಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಮಾತನಾಡುವಾಗ ಇತಿಮಿತಿ ಅರಿಯಬೇಕು. ಅವರು ತಮ್ಮ ಗೌರವವನ್ನು ಉಳಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.
ಹಾಗೆಯೇ ಮತಾಂತರದ ಬಗೆಗೂ ಮಾತನಾಡಿದ ಅವರು, ರಾಜ್ಯದಲ್ಲಿ ಹಣದಾಸೆ, ಮೋಸ, ಒತ್ತಾಯದಿಂದ ಮತಾಂತರ ನಡೆಯುತ್ತಿದೆ. ಮುಗ್ಧ ಜನರನ್ನು ತಪ್ಪು ದಾರಿಗೆಳೆದು ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಯಲು ಅಗತ್ಯ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು. ಮತಾಂತರ ತಡೆಗೆ ಸರ್ವ ರೀತಿಯ ಪ್ರಯತ್ನಗಳು ಸಾಗಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.