ಬೆಂಗಳೂರು: ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶೀಘ್ರ ಫೇಶಿಯಲ್ ರೆಕಗ್ನಿಷನ್ ವ್ಯವಸ್ಥೆ ಅಳವಡಿಸಲಾಗಿದೆ.
ಆ ಮೂಲಕ ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡದ ದೇಶದ ಮೊದಲ ರೈಲು ನಿಲ್ದಾಣ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆ ಸುಧಾರಿಸಲು ಈ ಯೋಜನೆಯನ್ನು ಎಲ್ಲಾ ರೈಲು ನಿಲ್ದಾಣಗಳಲ್ಲಿಯೂ ಅಳವಡಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದು ಕೃತಕ ಬುದ್ಧಿಮತ್ತೆ ಆಧರಿತ ಅಪ್ಲಿಕೇಷನ್ ಆಗಿದ್ದು, ವ್ಯಕ್ತಿಯ ಮುಖದ ವಿನ್ಯಾಸ, ಆಕಾರವನ್ನು ಆಧರಿಸಿ ಮಾದರಿಗಳನ್ನು ವಿಶ್ಲೇಷಿಸುವ ಮೂಲಕ ವ್ಯಕ್ತಿಯನ್ನು ಗುರುತಿಸುವ ಸಾಮರ್ಥ್ಯ ಹೊಂದಿದೆ. ಈ ವ್ಯವಸ್ಥೆಯನ್ನು ನಿಲ್ದಾಣದಾದ್ಯಂತ ವ್ಯಾಪಕವಾಗಿ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭದ್ರತಾ ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಈ ವ್ಯವಸ್ಥೆಯನ್ನು ಅಳವಡಿಸಿರುವುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರಿಂದ ಯಾವುದೇ ರೀತಿಯ ವೈಯಕ್ತಿಕ ಮಾಹಿತಿಗಳು, ಗೌಪ್ಯತೆಗಳು ಸೋರಿಕೆಯಾಗುವುದಿಲ್ಲ ಎಂಬುದಾಗಿಯೂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.