ನವದೆಹಲಿ: ಅಪ್ಘಾನಿಸ್ಥಾನದಲ್ಲಿ ತಾಲಿಬಾನ್ ಆಡಳಿತ ರಚನೆಯಾದ ಬಳಿಕ ಪಾಕಿಸ್ಥಾನವು ಭಾರತದಲ್ಲಿ ಭಯೋತ್ಪಾದನಾ ಕೃತ್ಯ ನಡೆಸುವ ತನ್ನ ಕಾರ್ಯವನ್ನು ತೀವ್ರಗೊಳಿಸಿದ್ದು ಮಾತ್ರವಲ್ಲ, ಭಾರತದೊಳಗೆ ಅಕ್ರಮವಾಗಿ ಮಾದಕ ವಸ್ತುಗಳನ್ನು ಪೂರೈಸಲು ಪ್ರಚೋದನೆ ನೀಡುತ್ತಿದೆ.
ಈ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ಗಡಿಗಳಲ್ಲಿ ಕೇಂದ್ರ ಸರಕಾರವು ಹೆಚ್ಚಿನ ಕಣ್ಗಾವಲು ಇರಿಸಿದೆ. ಇತ್ತೀಚೆಗೆ ಗುಜರಾತಿನ ಅದಾನಿ ಬಂದರಿನಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡ ಬಳಿಕ ಹೆಚ್ಚಿನ ಹೈಅಲರ್ಟ್ ಘೋಷಿಸಲಾಗಿದೆ.
ಭಯೋತ್ಪಾದನೆಯಂತೆಯೇ ಮಾದಕವಸ್ತು ಕಳ್ಳಸಾಗಣೆಕೆಯ ವಿರುದ್ಧವೂ ಕೇಂದ್ರ ಗೃಹ ಸಚಿವಾಲಯ ಕಠಿಣ ವ್ಯವಸ್ಥೆಯನ್ನು ರೂಪಿಸುತ್ತಿದೆ. ಮಾದಕವಸ್ತು ಕಳ್ಳಸಾಗಾಣಿಕೆ ಯನ್ನು ತಡೆಯುವ ನಿಟ್ಟಿನಲ್ಲಿ 26 ದೇಶಗಳೊಂದಿಗೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಗೃಹ ಸಚಿವಾಲಯದ ಮೂಲಗಳ ಪ್ರಕಾರ, ಎರಡು ದೇಶಗಳ ಏಜೆನ್ಸಿಗಳ ನಡುವಿನ ಉತ್ತಮ ಸಮನ್ವಯ ಮತ್ತು ಮೇಲ್ವಿಚಾರಣಾ ವ್ಯವಸ್ಥೆಗಳು ಮಾದಕ ವಸ್ತು ಕಳ್ಳಸಾಗಣಿಕೆ ಏನು ತಡೆಯುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.