ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೆ ಅರಿವಾಗಿದೆ. ಆದ್ದರಿಂದ ಆತಂಕಕ್ಕೆ ಒಳಗಾಗಿರುವ ಕಾಂಗ್ರೆಸಿಗರು ತಮ್ಮತ್ತ ಜನರು ಗಮನ ವಹಿಸುವಂತೆ ಮಾಡಲು ಬಿಜೆಪಿಯಿಂದ ಕಾಂಗ್ರೆಸ್ಗೆ ಕೆಲವು ಶಾಸಕರು ಬರುತ್ತಾರೆ ಎಂಬ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಅವರು ಮೈಸೂರಿನಲ್ಲಿ ಮೋದಿ ಯುಗ್ ಉತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿಯೇ ಕಾಂಗ್ರೆಸ್ ಒಡೆದು ಹೋಗಿದೆ. ಹಾಗೆಯೇ ಕಾಂಗ್ರೆಸ್ನಲ್ಲಿ ಎಲ್ಲರೂ ಮುಖ್ಯಮಂತ್ರಿಗಳಾಗಬೇಕು ಎಂದು ಪ್ರಯತ್ನ ಪಡುತ್ತಿದ್ದಾರೆ. ಆದರೆ ಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಉಪಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಪ್ರಧಾನಿ ಮೋದಿ ಅವರ ಹೆಸರಿನ ಮೂಲಕ.ಚುನಾವಣೆ ಗೆಲ್ಲುವುದಲ್ಲ. ತಮ್ಮ ತಮ್ಮ ಪ್ರಯತ್ನದ ಮೂಲಕವೇ ಚುನಾವಣೆ ಗೆಲ್ಲಬೇಕು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.