ಭೋಪಾಲ್: ಮಧ್ಯಪ್ರದೇಶ ಸರ್ಕಾರವು ತನ್ನ ರಾಜ್ಯದ ಬಡ ಜನರ ಕಲ್ಯಾಣಕ್ಕಾಗಿ ಮಹತ್ವದ ನಿರ್ಧಾರವನ್ನು ಘೋಷಣೆ ಮಾಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ವಸತಿ ನಿರ್ಮಾಣಕ್ಕೆ ಉಚಿತ ಮರಳು ನೀಡುವುದಾಗಿ ಅಲ್ಲಿನ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಘೋಷಣೆ ಮಾಡಿದ್ದಾರೆ.
ಮರಳಿನ ದರ ಹೆಚ್ಚಾಗಿರುವ ಕಾರಣದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳು ತಮ್ಮ ಮನೆಗಳ ನಿರ್ಮಾಣಕ್ಕಾಗಿ ಕಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಈ ಯೋಜನೆಯ ಫಲಾನುಭವಿಗಳಿಗೆ ಉಚಿತ ಮರಳನ್ನು ನೀಡುವುದಾಗಿ ಚೌಹಾನ್ ಘೋಷಣೆ ಮಾಡಿದ್ದಾರೆ.
ಟ್ವೀಟ್ ಮಾಡಿರುವ ಚೌಹಾಣ್, “ಪ್ರಧಾನ ಮಂತ್ರಿ ಆವಾಸ್ ಯೋಜನೆಗಾಗಿ ಸಮೀಕ್ಷೆಯನ್ನು ನಡೆಸಲಾಗುವುದು, ಇದರಿಂದ ಗರಿಷ್ಠ ಸಂಖ್ಯೆಯ ಬಡ ಕುಟುಂಬಗಳಿಗೆ ಯೋಜನೆಯ ಲಾಭವನ್ನು ನೀಡಬಹುದು” ಎಂದಿದ್ದಾರೆ.
ಎಲ್ಲರಿಗೂ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ತೆಗೆದುಕೊಂಡ ನಿರ್ಧಾರ ಮಹತ್ವದ್ದಾಗಿದೆ ಮತ್ತು ಇತರ ರಾಜ್ಯಗಳಿಗೂ ಮಾದರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.