ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಕುರಿತು ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶವನ್ನು ಹೈಕೋರ್ಟ್ ನೀಡಿದೆ.
ಈ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದನ್ವಯ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ಸಂದರ್ಭದಲ್ಲಿ ನ್ಯಾಯಾಲಯದ ಹಿಂದಿನ ಆದೇಶದ ಅನ್ವಯ ಅನಧಿಕೃತ ಧಾರ್ಮಿಕ ಕಟ್ಟಡಗಳಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಕಳೆದ ಸೆ. 17 ರಂದು ಸರ್ಕಾರ ಕೋರ್ಟ್ಗೆ ವರದಿ ನೀಡಬೇಕಾಗಿತ್ತು. ಆದರೆ ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯ ಅ. 4 ಕ್ಕೆ ಈ ವಿಚಾರಣೆ ಮುಂದೂಡಿತ್ತು. ಈ ವಿಚಾರಣೆ ವೇಳೆ ವಕೀಲರು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದರು. ಅದಕ್ಕೆ ಸಮ್ಮತಿಸಿರುವ ನ್ಯಾಯಾಲಯವು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.