ನವದೆಹಲಿ: ಭಾರತದಲ್ಲಿ ಕರೋನವೈರಸ್ ವಿರುದ್ಧದ ಹೋರಾಟ ಕ್ಷಿಪ್ರಗತಿಯಲ್ಲಿ ನಿರಂತರವಾಗಿ ನಡೆಯುತ್ತಿದೆ. ಈಗಾಗಲೇ ಭಾರತದ ಒಟ್ಟು ಲಸಿಕಾ ವ್ಯಾಪ್ತಿ 92.11 ಕೋಟಿ ತಲುಪಿದೆ.
ನಿನ್ನೆ ಒಟ್ಟು 59 ಲಕ್ಷ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಬೆಳಗ್ಗೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,833 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ದೇಶದ ಒಟ್ಟು ಸಕ್ರಿಯ ಪ್ರಕರಣಗಳು 2,46,687 ಆಗಿದೆ. ಇದು 203 ದಿನಗಳಲ್ಲೇ ಅತೀ ಕಡಿಮೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 24,770 ಮಂದಿ ಸಾಂಕ್ರಾಮಿಕದಿಂದ ಚೇತರಿಸಿಕೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ 59,48,360 ಲಸಿಕೆ ಡೋಸ್ಗಳನ್ನು ನೀಡಲಾಗಿದ್ದು, ರಾಷ್ಟ್ರವ್ಯಾಪಿ ಕೋವಿಡ್ -19 ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ಈವರೆಗೆ ನೀಡಲಾದ ಒಟ್ಟು ಲಸಿಕೆ ಡೋಸ್ 92 ಕೋಟಿಗಳನ್ನು ದಾಟಿದೆ.
ಆರೋಗ್ಯ ಸಚಿವಾಲಯದ ಪ್ರಕಾರ, 6.93 ಕೋಟಿಗೂ ಹೆಚ್ಚು ಬಾಕಿ ಅಥವಾ ಬಳಕೆಯಾಗದ ಕೋವಿಡ್ -19 ಲಸಿಕೆ ಡೋಸ್ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತದಲ್ಲಿ ಇನ್ನೂ ಲಭ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.