ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನಾಳೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರು, ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ನಾಳೆ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬವನ್ನು ಉದ್ಘಾಟನೆ ಮಾಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಎಸ್. ಟಿ. ಸೋಮಶೇಖರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರು, ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ.
ಈ ಸಂಬಂಧ ಮುನ್ನೆಚ್ಚರಿಕೆಯಾಗಿ ತಾವರೆಕಟ್ಟೆ ಗೇಟ್ ಸಮೀಪ ಬ್ಯಾರಿಕೇಡ್ ಅಳವಡಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ತಯಾರಿ ಕೆಲಸದ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳಿಗೆ ಮಾತ್ರವೇ ಪ್ರವೇಶ ಕಲ್ಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.