ಮಂಗಳೂರು: ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಳೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಲಿರುವ ಅವರು, ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಈ ಬಗ್ಗೆ ಸಭೆ ನಡೆಸಿರುವ ಜಿಲ್ಲಾಧಿಕಾರಿಗಳು, ಅ. 7 ರಂದು ರಾಷ್ಟ್ರಪತಿಗಳು ಮಂಗಳೂರಿಗೆ ಬರಲಿದ್ದಾರೆ. ಬಳಿಕ ಅ. 8 ರಂದು ಸಂಜೆ ನವದೆಹಲಿಗೆ ವಾಪಾಸ್ಸಾಗಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಊಟ, ವಸತಿ, ಬಂದೋಬಸ್ತ್ಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.