ಶಿವಮೊಗ್ಗ: ಆರ್ಎಸ್ಎಸ್ನ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಡಾ. ಅಶ್ವತ್ಥ್ ನಾರಾಯಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಹ ಸಂಘ ಪರಿವಾರದ ಹಿನ್ನೆಲೆಯಿಂದ ಬಂದವನು. ಮಂತ್ರಿ ಆಗಿದ್ದೇನೆ. ಅದನ್ನೇ ಆಪಾದನೆ ಮಾಡುವುದು ಸರಿಯಲ್ಲ. ದೇಶದಲ್ಲಿ ಸಂಘ ಪರಿವಾರದವರು ಅಧಿಕಾರಕ್ಕೆ ಬರುತ್ತಿದ್ದಾರೆ ಎಂಬುದು ಸರಿಯಲ್ಲ. ಇಡೀ ಜನರು ಇಂದು ಸಂಘದ ಜೊತೆಗಿದ್ದಾರೆ. ಹೀಗಿರುವಾಗ ಸಂಘದ ಹಿನ್ನೆಲೆಯುಳ್ಳವರು ಅಧಿಕಾರಕ್ಕೆ ಬರಬಾರದು ಎಂದೇನಾದರೂ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಸಂಘದಿಂದ ಬಂದವರು ಪ್ರಧಾನಿ, ಮುಖ್ಯಮಂತ್ರಿಗಳಾಗಿದ್ದಾರೆ. ಪರಿವಾರದ ಹಿನ್ನೆಲೆಯುಳ್ಳವರು ಎಲ್ಲಾ ಸ್ಥಾನದಲ್ಲೂ ಇದ್ದಾರೆ. ಅದನ್ನೇ ಆಪಾದನೆಗೆ ಬಳಕೆ ಮಾಡುವುದು ಸರಿಯಲ್ಲ. ಕೊಟ್ಟ ಜವಾಬ್ದಾರಿಯನ್ನು ಅರಿತು ಸರಿಯಾಗಿ ಕೆಲಸ ಮಾಡುವುದು ಮುಖ್ಯ ಎಂದು ಅವರು ತಿರುಗೇಟು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.