ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಸ್ವಾಮಿತ್ವಾ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನ ಮಂತ್ರಿ ಸ್ವಾಮಿತ್ವ ಯೋಜನೆಯಡಿ ಫಲಾನುಭವಿಗಳಿಗೆ ಮೋದಿ ಭೂಮಿ ಹಕ್ಕು ಪತ್ರಗಳ ದಾಖಲೆಗಳನ್ನು ವರ್ಚುವಲ್ ಆಗಿ ವಿತರಿಸಿದರು.
ಸಮಾರಂಭದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೀಡಿದ ಜನಕಲ್ಯಾಣ ಮತ್ತು ಸೂರಜ್ ಮಾದರಿಯು ಗುಜರಾತ್ ರಾಜ್ಯವನ್ನು ಬದಲಿಸಿತು ಮತ್ತು ಕಳೆದ 20 ವರ್ಷಗಳಲ್ಲಿ ಪ್ರಧಾನಿ ಭಾರತವನ್ನು ಪರಿವರ್ತಿಸಿದ್ದಾರೆ ಎಂದು ಹೇಳಿದರು.
ಎಲ್ಲ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಪರಿಚಯಿಸಿದ ಪಾರದರ್ಶಕ ವ್ಯವಸ್ಥೆಗಳಿಂದಾಗಿ ಅಭಿವೃದ್ಧಿಯು ವೇಗವನ್ನು ಪಡೆದುಕೊಂಡಿದೆ ಎಂದು ಹೇಳಿದರು. ಪ್ರಧಾನ ಮಂತ್ರಿಯವರ ಉತ್ತಮ ಆಡಳಿತ ಮಾದರಿಯೊಂದಿಗೆ ಮಧ್ಯಪ್ರದೇಶವೂ ಆತ್ಮನಿರ್ಭರ ಆಗುತ್ತದೆ ಎಂದು ಚೌಹಾಣ್ ಭರವಸೆ ನೀಡಿದರು.
ಸಾಮಿತ್ವ ಎಂಬುದು ಪಂಚಾಯತ್ ರಾಜ್ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಗ್ರಾಮೀಣ ಜನವಸತಿ ಪ್ರದೇಶಗಳ ನಿವಾಸಿಗಳಿಗೆ ಆಸ್ತಿ ಹಕ್ಕುಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ನಗರ ಪ್ರದೇಶಗಳಂತೆ ಗ್ರಾಮಸ್ಥರು ಸಾಲ ಮತ್ತು ಇತರ ಹಣಕಾಸಿನ ಪ್ರಯೋಜನಗಳನ್ನು ಪಡೆಯಲು ಈ ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಈ ಯೋಜನೆ ದಾರಿ ಮಾಡಿಕೊಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.