ಬೆಂಗಳೂರು: ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತರಿದ್ದರು.
ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಇಂದು ರಾಜಭವನದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.