ಬೆಂಗಳೂರು: ಮಳೆಯಿಂದಾಗಿ ಜಲಾವೃತವಾಗುವ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಜೋರು ಮಳೆ ಸುರಿದ ಸಂದರ್ಭದಲ್ಲಿ ನಗರದ ಅತ್ಯಂತ ತಗ್ಗು ಪ್ರದೇಶಗಳಲ್ಲಿ, ಕೆರೆಗಳ ಆವರಣ ಭಾಗ, ರಾಜಕಾಲುವೆಗಳ ಭಾಗಗಳು ಜಲಾವೃತವಾಗುತ್ತವೆ. ಮಳೆ ಬಂದಾಗ ಇದಕ್ಕೆ ಪರಿಹಾರ ಮಾಡುವುದು ಕೇವಲ ತಾತ್ಕಾಲಿಕವಾಗಿರುತ್ತದೆ. ಆದ್ದರಿಂದ ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜಕಾಲುವೆಗಳು, ಕೆರೆಗಳ ಆವರಣಗಳು ಒತ್ತುವರಿಯಾಗಿ ವಸತಿ ನಿರ್ಮಾಣ ಮಾಡಿಕೊಂಡವರಿಗೆ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ದೀರ್ಘಕಾಲದ ಮತ್ತು ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ರಸ್ತೆಗಳ ನಿರ್ಮಾಣ, ನಿರ್ವಹಣೆ ಮೊದಲಾದವುಗಳ ಬಗೆಗೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.