ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಬೆನ್ನಲ್ಲೇ, ಬಿಜೆಪಿ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು ಅಭ್ಯರ್ಥಿಗಳಾಗಿರುವರು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.
ಅ. 30 ರಂದು ಈ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಅಭ್ಯರ್ಥಿಗಳನ್ನು ಪ್ರಕಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.