ಮೈಸೂರು: ರಾಜ್ಯದ ರೈತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಹಿಂದೆ ಜಾರಿಯಲ್ಲಿದ್ದ ‘ಯಶಸ್ವಿ ಯೋಜನೆ’ ಯನ್ನು ಮತ್ತೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಮೈಸೂರಿನ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಈ ಹಿಂದೆ ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಾಡಿನ ರೈತರ ಆರೋಗ್ಯ ಹಿತದೃಷ್ಟಿಯಿಂದ ಯಶಸ್ವಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದರು. ಈ ಯೋಜನೆ ಈಗ ಚಾಲ್ತಿಯಲ್ಲಿಲ್ಲ. ಅದನ್ನು ಮತ್ತೆ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಸಂಬಂಧ ಸಚಿವರ ಜೊತೆಗೆ ಚರ್ಚೆ ನಡೆದಿದೆ. ಆದರೆ ಪ್ರಸ್ತುತ ಕೊರೋನಾ ಸಂಕಷ್ಟ ಇರುವುದರಿಂದ ಹಣಕಾಸಿನ ಸಮಸ್ಯೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿಕೊಂಡಾಗ ಈ ಯೋಜನೆಯನ್ನು ಮತ್ತೆ ಆರಂಭ ಮಾಡುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.