ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮತ್ತು ದೆಹಲಿ ಸರಕಾರದ ನಡುವಣ ಮತ್ತೆ ಶೀತಲ ಸಮರ ಕೊನೆಯೇ ಆಗದಂತೆ ಕಾಣುತ್ತಿದೆ.
2002 ರಲ್ಲಿ ಶೀಲಾ ದೀಕ್ಷಿತ್ ದೆಹಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ನಡೆದಿದ್ದ ಸಾರಿಗೆ ಇಲಾಖೆ ಹಗರಣ ಇದೀಗ ಮತ್ತೆ ಗರ್ವನರ್ ಮತ್ತು ಸರ್ಕಾರದ ನಡುವಣ ಜಂಗಿ ಕುಸ್ತಿಗೆ ಕಾರಣವಾಗಿದೆ.
ಸಾರಿಗೆ ಇಲಾಖೆ ವಾಹನಗಳಿಗೆ ಫಿಟ್ನೆಸ್ ಪ್ರಮಾಣಪತ್ರ ನೀಡುವಲ್ಲಿ ನಡೆದ 100 ಕೋಟಿ ರೂ. ಅವ್ಯವಹಾರ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದರು.
ಈ ತನಿಖೆ ಸಂಬಂಧ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮಧ್ಯಪ್ರವೇಶಿಸಿ 2002 ರಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ನಡೆಸಲು ರಾಜ್ಯಸರಕಾಕ್ಕೆ ಹಕ್ಕಿಲ್ಲ ಇದು ಸಂವಿಧಾನಿಕವೂ ಅಲ್ಲ ಎಂದು ಪತ್ರ ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.