ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಂಕಲಗಿಯಲ್ಲಿ ಗೋಡೆ ಕುಸಿತದಿಂದ ಮೃತಪಟ್ಟ 7 ಮಂದಿಯ ಕುಟುಂಬಕ್ಕೆ ತಲಾ 2 ಲಕ್ಷ ರೂ. ಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಈ ವಿಚಾರವನ್ನು ಪ್ರಧಾನಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ. ಈ ಟ್ವೀಟ್ನಲ್ಲಿ ‘ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿದು ಜೀವಹಾನಿ ಸಂಭವಿಸಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬದ ಜೊತೆಗೆ ನಾನಿದ್ದೇನೆ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ ನೀಡಲಾಗುವುದು’ ಎಂದು ತಿಳಿಸಲಾಗಿದೆ.
ರಾಜ್ಯ ಸರ್ಕಾರ ಸಹ ಈಗಾಗಲೇ ಸಂತ್ರಸ್ತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳ ಪರಿಹಾರ ಒದಗಿಸುವುದಾಗಿ ಘೋಷಿಸಿದೆ.
The loss of lives due to a house collapse in Belagavi, Karnataka is saddening. My thoughts are with the bereaved kin in this hour of sadness. An ex-gratia of Rs. 2 lakh each from PMNRF would be paid to the next of kin of the deceased: PM @narendramodi
— PMO India (@PMOIndia) October 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.