ನವದೆಹಲಿ: ಜಿಎಸ್ಟಿ ಪರಿಹಾರದಲ್ಲಿನ ಕೊರತೆಯನ್ನು ನೀಗಿಸಲು ಹಣಕಾಸು ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರೂ 40,000 ಕೋಟಿ ಮೊತ್ತವನ್ನು ಬ್ಯಾಕ್ ಟು ಬ್ಯಾಕ್ ಸಾಲ ಸೌಲಭ್ಯದ ಅಡಿಯಲ್ಲಿ ಬಿಡುಗಡೆ ಮಾಡಿದೆ. ಈ ಮೊದಲು ಜುಲೈ 15, 2021 ರಂದು ರೂ 75,000 ಕೋಟಿ ಮೊತ್ತವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡಲಾಗಿತ್ತು.
ಪ್ರಸ್ತುತ ಹಣ ಬಿಡುಗಡೆಯೊಂದಿಗೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್ಟಿ ಪರಿಹಾರದ ಬದಲಾಗಿ ಬ್ಯಾಕ್ ಟು ಬ್ಯಾಕ್ ಸಾಲವಾಗಿ ಬಿಡುಗಡೆಯಾದ ಒಟ್ಟು ಮೊತ್ತವು ರೂ 1,15,000 ಕೋಟಿಗೆ ತಲುಪಿದೆ. ಈ ಮೊತ್ತವು ಪ್ರತಿ 2 ತಿಂಗಳಿಗೊಮ್ಮೆ ಸಾಮಾನ್ಯ ಜಿಎಸ್ಟಿ ಪರಿಹಾರವಾಗಿ ನೈಜ ಸೆಸ್ ಸಂಗ್ರಹದಿಂದ ಬಿಡುಗಡೆ ಮಾಡುವ ಮೊತ್ತಕ್ಕೆ ಹೆಚ್ಚುವರಿಯಾಗಿದೆ.
28.05.2021 ರಂದು ನಡೆದ 43 ನೇ ಜಿಎಸ್ಟಿ ಕೌನ್ಸಿಲ್ ಸಭೆಯ ನಂತರ, ಕೇಂದ್ರ ಸರ್ಕಾರವು 2021-22ರಲ್ಲಿ ರೂ 1.59 ಲಕ್ಷ ಕೋಟಿ ಸಾಲವನ್ನು ಪಡೆದು, ಅದನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡಲು ನಿರ್ಧರಿಸಿದೆ.
ಬ್ಯಾಕ್ ಟು ಬ್ಯಾಕ್ ಲೋನ್ ಆಗಿ ರಾಜ್ಯಗಳಿಗೆ ನೀಡಬೇಕಾದ ರೂ 1.59 ಲಕ್ಷ ಕೋಟಿ ಮೊತ್ತವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆಯಾಗುವ ಪರಿಹಾರ ಮೊತ್ತ 1 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿದೆ. 2021-22ರ ಹಣಕಾಸು ವರ್ಷದಲ್ಲಿ ಜಿಎಸ್ಟಿ ಪರಿಹಾರದ ಮೊತ್ತವು ರೂ 2.59 ಲಕ್ಷ ಕೋಟಿ ಮೊತ್ತವನ್ನು ಮೀರುವ ನಿರೀಕ್ಷೆಯಿದೆ.
ಎಲ್ಲಾ ಅರ್ಹ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬ್ಯಾಕ್-ಟು-ಬ್ಯಾಕ್ ಸಾಲ ಸೌಲಭ್ಯದ ಅಡಿಯಲ್ಲಿ ಪರಿಹಾರ ಕೊರತೆ ನಿಧಿಯ ವ್ಯವಸ್ಥೆಗಳನ್ನು ಒಪ್ಪಿಕೊಂಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.