ನವದೆಹಲಿ: ಅಕ್ಟೋಬರ್ 15 ರಿಂದ ಚಾರ್ಟರ್ಡ್ ವಿಮಾನಗಳ ಮೂಲಕ ಪ್ರಯಾಣಿಸುವವರಿಗೆ ಮತ್ತು ನವೆಂಬರ್ 15 ರಿಂದ ನಿಯಮಿತ ವಿಮಾನಗಳ ಮೂಲಕ ಪ್ರಯಾಣಿಸುವವರಿಗೆ ಪ್ರವಾಸಿ ವೀಸಾಗಳನ್ನು ನೀಡುವ ಮೂಲಕ ವಿದೇಶಿ ಪ್ರವಾಸಿಗರನ್ನು ದೇಶಕ್ಕೆ ಅನುಮತಿಸಲು ಭಾರತ ನಿರ್ಧರಿಸಿದೆ.
ಆದರೆ, ಕಾಲಕಾಲಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸೂಚಿಸಿದಂತೆ ಕೋವಿಡ್ -19 ಗೆ ಸಂಬಂಧಿಸಿದ ಎಲ್ಲಾ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ವಿದೇಶಿ ಪ್ರವಾಸಿಗರು, ಅವರನ್ನು ಭಾರತಕ್ಕೆ ಕರೆತರುವ ವಾಹಕಗಳು ಮತ್ತು ಲ್ಯಾಂಡಿಂಗ್ ನಿಲ್ದಾಣಗಳಲ್ಲಿನ ಇತರ ಎಲ್ಲರೂ ಅನುಸರಿಸುವುದು ಕಡ್ಡಾಯ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೊರೋನಾವೈರಸ್ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಮಾರ್ಚ್ 2020 ರಿಂದ ವಿಧಿಸಲಾಗಿದ್ದ ವೀಸಾ ಮತ್ತು ಅಂತಾರಾಷ್ಟ್ರೀಯ ಪ್ರಯಾಣದ ಮೇಲಿನ ನಿರ್ಬಂಧಗಳನ್ನು ಪ್ರಸ್ತುತವಿರುವ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಮತ್ತಷ್ಟು ಸರಾಗಗೊಳಿಸಲಾಗಿದೆ ಎಂದು ಸಚಿವಾಲಯವು ಹೇಳಿದೆ.
ವಿದೇಶಿ ಪ್ರವಾಸಿಗರು ಭಾರತಕ್ಕೆ ಬರಲು ಅನುವು ಮಾಡಿಕೊಡಲು ಪ್ರವಾಸಿ ವೀಸಾಗಳನ್ನು ಆರಂಭಿಸುವಂತೆ ಹಲವಾರು ರಾಜ್ಯ ಸರ್ಕಾರಗಳು ಹಾಗೂ ಪ್ರವಾಸೋದ್ಯಮ ವಲಯದ ವಿವಿಧ ಪಾಲುದಾರರಿಂದ ಮನವಿ ಸ್ವೀಕರಿಸಲಾಗುತ್ತಿದೆ ಈ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.