ನವದೆಹಲಿ: ಕರ್ನಾಟಕದ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಿಂಗಾರು ಹಂಗಾಮಿಗೆ 32 ಸಾವಿರ ಟನ್ ಡಿಎಪಿ ಗೊಬ್ಬರ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಸಂಬಂಧ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಹಾಗೆಯೇ ರಾಜ್ಯಕ್ಕೆ 10 ಸಾವಿರ ಟನ್ ಪೊಟ್ಯಾಷ್ ಗೊಬ್ಬರದ ಅಗತ್ಯತೆ ಇದೆ. ಅದರ ಪೂರೈಕೆಗೆ ಸಹ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಪ್ರಸ್ತುತ ಯೂರಿಯಾ ಗೊಬ್ಬರದ ಅಭಾವ ಇಲ್ಲ. ಕೊರತೆ ಇರುವ ಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.
Chief Minister @BSBommai today met Union Health & Family Welfare and Chemicals & Fertilizers Minister Shri @mansukhmandviya and discussed about various issues pertaining to Karnataka including Covid management and supply of vaccines.@MoHFW_INDIA pic.twitter.com/FURj1hpJWr
— CM of Karnataka (@CMofKarnataka) October 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.